ಒಂದೇ ಕುಟುಂಬದ ನಾಲ್ವರ ಮೃತದೇಹಗಳು ಪತ್ತೆಯಾದ ಘಟನೆ ತಮಿಳುನಾಡಿನ ತಿರುಪ್ಪರ್‌ನ ಕಲ್ಲಕಿನಾ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಸೆಂಥಿಲ್ ಕುಮಾರ್, ಅವರ ತಾಯಿ ಪುಷ್ಪಾವತಿ, ಸೋದರ ಸಂಬಂಧಿಗಳಾದ ಮೋಹನ್ ಮತ್ತು ರತ್ನಾಂಬಾಳ್ ಎಂದು ಗುರುತಿಸಲಾಗಿದೆ. ಮೃತದೇಹಗಳ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೃತ್ಯಕ್ಕೆ ಹಳೆಯ ದ್ವೇಷ ಕಾರಣ ಇರಬಹುದು. ಜಿಲ್ಲೆಯ ಹೊರಗಿನವರು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ `ಪಿಟಿಐ’ ವರದಿ ಮಾಡಿದೆ.
ಆರೋಪಿಗಳನ್ನು ಬಂಧಿಸುವವರೆಗೂ ಮೃತದೇಹಗಳನ್ನು ಸ್ವೀಕರಿಸುವುದಿಲ್ಲ ಎಂದು ಸಂಬಂಧಿಕರು ಪ್ರತಿಭಟನೆ ನಡೆಸಿದ್ದರು.
ಘಟನೆ ಸಂಬಂಧ ಪಲ್ಲಡಂ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ’ ವರದಿ ಮಾಡಿದೆ.
ಘಟನೆ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.