Sunday, July 6, 2025

ಹೆರಿಗೆ ‌ಮಾಡಿಸಲು ಲಂಚದ ಬೇಡಿಕೆಯಿಟ್ಟ ಸರ್ಕಾರಿ ಆಸ್ಪತ್ರೆ ವೈದ್ಯ ಲೋಕಾಯುಕ್ತ ಬಲೆಗೆ

ತುಮಕೂರು: ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆಯಿಟ್ಟು ವೈದ್ಯನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ತುರುವೇಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಡಾ‌. ಹರಿಪ್ರಸಾದ್ (44) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ವೈದ್ಯ. ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಹರಿಪ್ರಸಾದ್ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಲು 3 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ.

ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಮಹಿಳೆ ಸಂಬಂಧಿಯೊಬ್ಬರು ದೂರು ನೀಡಿದ್ದರು. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ವೈದ್ಯ ಸಿಕ್ಕಿಬಿದ್ದಿದ್ದಾನೆ. ಲೋಕಾಯುಕ್ತ ಇನ್ಸ್‍ಪೆಕ್ಟರ್ ರಾಮ ರೆಡ್ಡಿ, ಸಲೀಂ ಅಹ್ಮದ್ ಹಾಗೂ ಶಿವರುದ್ರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Related Articles

Latest Articles