ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶೂಟರ್ ಮನು ಭಾಕರ್, ಭಾರತಕ್ಕೆ ಮೂರನೇ ವೈಯಕ್ತಿಕ ಪದಕ ಗೆದ್ದು ಕೊಡುವ ಭರವಸೆ ಮೂಡಿಸಿದ್ದಾರೆ. ಈ ಮೊದಲು 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಕಂಚಿನ ಪದಕ ಗೆದ್ದುಕೊಟ್ಟಿದ್ದ ಮನು, ಆ ಬಳಿಕ ಸರಬ್ಜೋತ್ ಸಿಂಗ್ ಜೊತೆಗೂಡಿ ಮಿಶ್ರ 10 ಮೀಟರ್ ಏರ್ ಪಿಸ್ತೂಲ್ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು.
ಇದೀಗ ಮನು 25 ಮೀಟರ್ ಪಿಸ್ತೂಲ್ ಅರ್ಹತಾ ಸುತ್ತಿನ ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಗಳಿಸುವ ಮೂಲಕ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ. 25 ಮೀಟರ್ ಪಿಸ್ತೂಲ್ ಸ್ಪರ್ಧೆಯ ಅರ್ಹತೆಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಮನು 590-24x ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದು ಸುಲಭವಾಗಿ ಫೈನಲ್ ತಲುಪಿದರು.
ನಾಳೆ ಮಧ್ಯಾಹ್ನ ಒಂದು ಗಂಟೆಗೆ ಫೈನಲ್ ಸ್ಪರ್ಧೆ ನಡೆಯಲಿದೆ. ಭಾರತೀಯರೆಲ್ಲರೂ ಮನು ಅವರು ಪದಕ ಗೆದ್ದು ಬರಲಿ ಎಂದು ಹಾರೈಸೋಣ.
25 ಮೀ. ಸ್ಪರ್ಧೆಯಲ್ಲಿ ಅಮೋಘ ಪ್ರದರ್ಶನ
25 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿರಿರುವ ಮನು ಭಾಕರ್, ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ ಈ ಸ್ಪರ್ಧೆಯಲ್ಲಿ 6 ಪದಕಗಳನ್ನು ಗೆದ್ದಿದ್ದಾರೆ. ಕಳೆದ ವರ್ಷ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದಿದ್ದರು. 2022 ರಲ್ಲಿ ಕೈರೋದಲ್ಲಿ ನಡೆದಿದ್ದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದಿದ್ದರು. ಕಳೆದ ವರ್ಷ ನಡೆದ ವಿಶ್ವಕಪ್‌ನಲ್ಲಿ, ಜೂನಿಯರ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಹಾಗೂ 25 ಮೀಟರ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದರು.