ಬೆಂಗಳೂರು: ಮಲತಂದೆ ಇಬ್ಬರು ಹೆಣ್ಣುಮಕ್ಕಳನ್ನು ದಾರುಣ ಕೊಲೆಯಾಗಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ದಾಸರಹಳ್ಳಿಯಲ್ಲಿ ನಡೆದಿದೆ.
ದಾಸರಹಳ್ಳಿಯ ಕಾವೇರಿ ಬಡಾವಣೆಯಲ್ಲಿ ನೆಲೆಸಿರುವ ಉತ್ತರ ಭಾರತ ಮೂಲದ ಮಹಿಳೆಯ ಮನೆಯಲ್ಲಿ ಘಟನೆ ನಡೆದಿದೆ. ಸ್ವತಃ ಮಲತಂದೆಯೇ ಸುಮಾರು 14 ಹಾಗೂ 16 ವರ್ಷದ ಹೆಣ್ಣು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದಾನೆ. ಸುಮಿತ್ ಕೊಲೆ ಮಾಡಿ ಎಸ್ಕೇಪ್ ಆಗಿರುವ ಮಲತಂದೆ ಪೊಲೀಸ್ ಮೂಲಗಳು ತಿಳಿಸಿವೆ.
ಸದ್ಯ ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು, ಈಶಾನ್ಯ ವಿಭಾಗ ಡಿಸಿಪಿ ಸಜೀತ್, ಡಾಗ್ ಸ್ಕ್ವಾಡ್, ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಹಾಗೂ ಸೊಕೊ ಟೀಂ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.