Friday, June 27, 2025

ಲೆಟರ್ ಬರೆದಿಟ್ಟು ಬಾಲಕಿ ನಿಗೂಢ ನಾಪತ್ತೆ ಪ್ರಕರಣ ಸುಖಾಂತ್ಯ

ವಿದ್ಯಾರ್ಥಿನಿ ನಾಪತ್ತೆ ಪ್ರಕರಣವೊಂದು ಸುಖಾಂತ್ಯ ಕಂಡಿದೆ. ಮಂಡ್ಯನಗರದ ಹೊಸಹಳ್ಳಿಯಿಂದ 14 ವರ್ಷ ವಯಸ್ಸಿನ ವಿದ್ಯಾರ್ಥಿನಿ ಲಿಖಿತಾ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಸದ್ಯ ಬಾಲಕಿ ಪತ್ತೆಯಾಗಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.

ಬಾಲಕಿ ನಾಪತ್ತೆ ಬಗ್ಗೆ ಮಂಡ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಷಕರಾದ ಪ್ರಕಾಶ್ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕಿಯ ಪತ್ತೆಗಾಗಿ ಮಂಡ್ಯ ಪೊಲೀಸರು ಮೂರು ತಂಡಗಳನ್ನು ರಚನೆ ಮಾಡಿದ್ದರು. ಸದ್ಯ ಬಾಲಕಿ ಪತ್ತೆಯಾಗಿದ್ದು ಆಕೆಯನ್ನು ವಿಚಾರಣೆ ನಡೆಸಲಾಗಿದೆ. ಆಕೆ ಯಾಕಾಗಿ ಮನೆ ಬಿಟ್ಟು ತೆರಳಿದ್ದಾಳೆ ಎಂಬುವುದು ಇನ್ನಷ್ಟೇ ತಿಳಿದುಬರಬೇಕಾಗಿದೆ,

ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಲಿಖಿತಾ ಶಾಲೆಗೆ ಹೋಗುವುದಾಗಿ ಹೇಳಿ ಹೋದವಳು ನಾಪತ್ತೆಯಾಗಿದ್ದಾಳೆಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಆಕೆ ಬರೆದ ಎರಡು ಪುಟಗಳ ಪತ್ರ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣದ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದರು.

Related Articles

Latest Articles