ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೊಸ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳಿಗೆ ಟೆನ್ಷನ್ ಶುರುವಾಗಿದೆ. ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಿ ಆದೇಶ ಹೊರಡಿಸಿದೆ.
ಹೊಸ ನಿಯಮದಂತೆ ಪರೀಕ್ಷಾ ಅವಧಿ 2 ಗಂಟೆ 45 ನಿಮಿಷ ಇರಲಿದೆ. ಇದುವರೆಗಿನ ಪರೀಕ್ಷೆಗಳಲ್ಲಿ 3 ಗಂಟೆ ಅವಧಿ ಇರುತ್ತಿತ್ತು. ಪರೀಕ್ಷೆಗೆ ಉತ್ತರ ಬರೆಯುವ ಅವಧಿಯನ್ನು 2 ಗಂಟೆ 45 ನಿಮಿಷ ನಿಗದಿ ಮಾಡಿದ್ದರೂ, ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಓದಿಕೊಳ್ಳಲು ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗುತ್ತದೆ. ಈ ಹಿಂದೆ 3 ಗಂಟೆ ಇದ್ದಾಗಲೂ ಪ್ರಶ್ನೆಗಳ ಓದಿಗೆ ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗುತ್ತಿತ್ತು.
ಹಿಂದಿನ ಪರೀಕ್ಷೆಗಳಲ್ಲಿ ಪ್ರತಿ ವಿಷಯದ ಲಿಖಿತ ಪರೀಕ್ಷೆಯನ್ನು 100 ಅಂಕಗಳಿಗೆ ನಡೆಸಲಾಗುತ್ತಿತ್ತು. 2023-24ನೇ ಸಾಲಿನಿಂದ ಪ್ರಾಯೋಗಿಕ ಪರೀಕ್ಷೆ ಹಾಗೂ ಆಂತರಿಕ ಮೌಲ್ಯಮಾಪನಕ್ಕೆ ಪ್ರತ್ಯೇಕ ಅಂಕಗಳನ್ನು ನಿಗದಿ ಮಾಡಿದ್ದ ಕಾರಣ ಲಿಖಿತ ಪರೀಕ್ಷೆಯ ಅಂಕಗಳನ್ನು ಕಡಿತ ಮಾಡಲಾಗಿತ್ತು. ಆದರೆ, ಪರೀಕ್ಷಾ ಅವಧಿಯನ್ನು ಕಡಿತ ಮಾಡಿರಲಿಲ್ಲ.
- ಮಂಗಳೂರು: ‘ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ’- ಸಂಸದ ಕ್ಯಾ. ಚೌಟ ಆಕ್ರೋಶ
- ಅಬಕಾರಿ ಅಧಿಕಾರಿಗಳಿಂದ ಅನ್ಯರಾಜ್ಯದ ಕಾರ್ಮಿಕರ ದರೋಡೆ – ನಾಲ್ವರ ಬಂಧನ
- ದ್ವಿಚಕ್ರ ವಾಹನ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತ್ಯು
- ವಿಶ್ವದ ಅತ್ಯಂತ ದುಬಾರಿ ಬೆಲೆಯ ಮಾವು.. ಒಂದು ಹಣ್ಣಿನ ಬೆಲೆ ಬರೋಬ್ಬರಿ 10 ಸಾವಿರ ರೂಪಾಯಿ
- ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ವಿದ್ಯನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಗೃಹ ವಿಜ್ಞಾನ ಸೇರಿದಂತೆ ಪ್ರಾಯೋಗಿಕ ಪರೀಕ್ಷೆ ಇರುವ ಕೆಲ ವಿಷಯಗಳಲ್ಲಿ ಲಿಖಿತ ಪರೀಕ್ಷೆಯನ್ನು 70 ಅಂಕಗಳಿಗೆ ಹಾಗೂ ಪ್ರಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಲ್ಲಿ 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
ವಿದ್ಯಾರ್ಥಿಗಳು 80 ಅಂಕಗಳಿಗೆ ಉತ್ತರಿಸಬೇಕಾದ ವಿಷಯಗಳ ಪ್ರಶ್ನೆಪತ್ರಿಕೆಗಳು ಒಟ್ಟು 120 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಅವುಗಳಲ್ಲಿ 80 ಅಂಕಗಳಿಗಷ್ಟೇ ಉತ್ತರಿಸಬೇಕು. 70 ಅಂಕಗಳಿಗೆ ಉತ್ತರಿಸಬೇಕಾದ ವಿಷಯಗಳ ಪ್ರಶ್ನೆಪತ್ರಿಕೆಗಳು 105 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಅವುಗಳಲ್ಲಿ 70 ಅಂಕಗಳಿಗಷ್ಟೇ ಉತ್ತರಿಸಬೇಕು.
ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವಾಗ ಪಠ್ಯ ಹೊರತಾದ ಪ್ರಶ್ನೆಗಳಿಗೆ ಅವಕಾಶ ನೀಡಬಾರದು. ಪಠ್ಯಕ್ರಮದಲ್ಲೇ ಇರುವ ವಿಯಷಗಳ ಮೇಲಷ್ಟೇ ಪ್ರಶ್ನೆಗಳನ್ನು ಸಿದ್ಧಪಡಿಸುವುದು ಕಡ್ಡಾಯ ಎಂದು ಮಂಡಳಿ ಹೇಳಿದೆ.