Friday, June 27, 2025

ಮಂಗಳೂರು: ಲಿಮ್ಕಾ ಬುಕ್‌ ಆಫ್ ರೆಕಾರ್ಡ್ ಬರೆದಿದ್ದ ಕಂದಮ್ಮ ಪೂರ್ವಿ ನಿಧನ

ಮಂಗಳೂರು: ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್‌ ಎಸ್‌. ಕುಂದರ್‌ ವೈಶಾಲಿ ಎಲ್‌. ಬೆಂಗ್ರೆ ಅವರ ಪುತ್ರಿ, ಲಿಮ್ಕಾ ಬುಕ್‌ ದಾಖಲೆಯ ಪೂರ್ವಿ (7) ಅನಾರೋಗ್ಯದಿಂದ ನಿಧನ ಹೊಂದಿದ್ದಾಳೆ.

2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್‌ ಆಟವಾಡಿ ಇಂಡಿಯನ್‌ ಬುಕ್‌ ಆಫ್‌ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದಳು. ಸಣ್ಣ ಪ್ರಾಯದಲ್ಲೇ ಚುರುಕಿನಿಂದ ಕೂಡಿದ್ದ ಪೂರ್ವಿ ಫುಟ್‌ಬಾಲ್‌, ಭರತನಾಟ್ಯದಲ್ಲಿ ತನ್ನ ಸಾಮರ್ಥ್ಯ ಪ್ರದರ್ಶಿಸಿ ಜನರ ಪ್ರೀತಿಗೆ ಪಾತ್ರವಾಗಿದ್ದಳು.

ಗ್ರೀನ್‌ ವುಡ್‌ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಕಲಿಯುತ್ತಿದ್ದ ಪೂರ್ವಿ ಅನಾರೋಗ್ಯಕ್ಕೀಡಾದಾಗ ಮಂಗಳೂರಿಗೆ ಬಂದು ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಅವರ ನಿಧನಕ್ಕೆ ಬೆಂಗ್ರೆ ವಿದ್ಯಾರ್ಥಿ ಸಂಘ, ಸ್ಥಳೀಯ ಸಂಘ ಸಂಸ್ಥೆಗಳು ಶೋಕ ವ್ಯಕ್ತಪಡಿಸಿವೆ.

Related Articles

Latest Articles