Friday, June 27, 2025

ಎರಡು ಬೈಕ್​ಗಳ ಭೀಕರ ಅಪಘಾತ: ನಾಲ್ವರು ಯುವಕರ ದುರಂತ ಅಂತ್ಯ

ಕಲಬುರಗಿ: ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದ ಬಳಿ ಸಂಭವಿಸಿದೆ. ಸಿದ್ದು, ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಮೃತರು.

ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್​​ಗೆ ಎದುರಿಗೆ ಬಂದ ಮತ್ತೊಂದು ಬೈಕ್​​ ಡಿಕ್ಕಿ ಹೊಡೆದಿವೆ. ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಸಿಕೊಂಡಿದ್ದಾರೆ.

Related Articles

Latest Articles