ಬೆಂಗಳೂರ : ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4-5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಮನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ಕೊಡಗು. ಹಾಸನ, ಚಿಕ್ಕಮಗಳೂರು. ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.
ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆ ಭಾರಿ ಮಳೆಯಾಗಿದೆ. ಶೃಂಗೇರಿ, ಕೊಪ್ಪ, ಜಯಪುರ ಸೇರಿದಂತೆ ಜಿಲ್ಲೆಯ ಹಲವು ಕಡೆ ಸತತ 1 ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆಯಾಗಿದೆ.