Friday, June 27, 2025

ಬೆಂಗಳೂರಿನಲ್ಲಿ ಪಾಕಿಸ್ತಾನದ ಗೂಡಾಚಾರಿ ಅರೆಸ್ಟ್.!

ಬೆಂಗಳೂರು: ಗುಪ್ತಚರ ಇಲಾಖೆ (Intelligence Department) ಹಾಗೂ ಸೇನಾ ಇಂಟಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಉತ್ತರಪ್ರದೇಶದ ಗಾಜಿಯಾಬಾದ್​​​ ಮೂಲದ ನಿವಾಸಿ, ಬಿಇಎಲ್​​​ನಲ್ಲಿ ಕೆಲಸ ಮಾಡುತ್ತಿದ್ದ ದೀಪ್​ ರಾಜ್​ ಚಂದ್ರ ಬಂಧನಕ್ಕೊಳಗಾದವ. ಈತ ಬಿಇಎಲ್​ನ ಪ್ರಾಡಕ್ಟ್​​​ ಡೆವಲಪ್ಮೆಂಟ್ ಆ್ಯಂಡ್ ಇನ್ನೋವೇಶನ್​​ ಸೆಂಟರ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ.

ಬೆಂಗಳೂರಿನ ಮತ್ತಿಕೆರೆ ಬಳಿ ನೆಲೆಸಿದ್ದ. ಈತ ಬಿಇಎಲ್​​​ನಿಂದ ರಕ್ಷಣಾ ವಿಚಾರಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂಬ ಆರೋಪವಿದೆ. ಕೇಂದ್ರ ಮತ್ತು ರಾಜ್ಯ ಗುಪ್ತಚರ ಅಧಿಕಾರಿಗಳು, ಮಿಲಿಟರಿ ಇಂಟಲಿಜೆನ್ಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿವೆ.

Related Articles

Latest Articles