Friday, June 27, 2025

ಅಜ್ಜಿಯ ಸಾವಿನ ದುಃಖದಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ಇಂದು ಕರ್ನಾಟಕದಾದ್ಯಂತ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭವಾಗಿವೆ. ಮೊದಲ ಪರೀಕ್ಷೆಯ ದಿನವೇ ವಿದ್ಯಾರ್ಥಿನಿಯ ಅಜ್ಜಿ ಸಾವನ್ನಪ್ಪಿದ್ದು, ದುಖಃದಲ್ಲೇ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ.

ಈ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ನಡೆದಿದೆ. ಡಂಬಳದ ಜಗದ್ಗುರು ತೋಂಟದಾರ್ಯ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಜಲಜಾಕ್ಷಿ ಕಿಲಾರಿ ಎಂಬಾಕೆಯ ಅಜ್ಜಿ ವಯೋಸಹಜ ಕಾಯಿಲೆಯಿಂದ ಮೃತರಾಗಿದ್ದಾರೆ. ಎಸ್​​ಎಸ್​ಎಲ್​​ಸಿ ಕನ್ನಡ ವಿಷಯದ ಪರೀಕ್ಷೆ ಬರೆಯಲು ಸಿದ್ಧಳಾಗಿದ್ದ ವಿದ್ಯಾರ್ಥಿನಿಗೆ ಅಜ್ಜಿ ಸಾವು ದುಃಖ ತಂದಿದೆ.

ಪರೀಕ್ಷೆಗೆ ಬರೆಯಲು ಭಯದಲ್ಲಿದ್ದ ಜಲಜಾಕ್ಷಿಗೆ ಪಾಲಕರು, ಶಾಲೆಯ ಶಿಕ್ಷಕರು ಮತ್ತು ಅವಳ ಸಹಪಾಠಿಗಳು ಧೈರ್ಯ ತುಂಬಿದ್ದಾರೆ. ಬಳಿಕ ಮೃತ ಅಜ್ಜಿಗೆ ಪೂಜೆ ಮಾಡಿ, ಪ್ರಾರ್ಥನೆ ಸಲ್ಲಿಸಿ ಪುಷ್ಪ ಸಮರ್ಪಿಸಿ ಆಶೀರ್ವಾದ ಪಡೆದುಕೊಂಡು ಬಂದು ಎದೆಯಲ್ಲಿ ದುಃಖ ತುಂಬಿಕೊಂಡೇ ಧೈರ್ಯದಿಂದ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ.

Related Articles

Latest Articles