ಕಾರ್ಕಳ: ತಾಲ್ಲೂಕಿನ ನಿಟ್ಟೆ ಗ್ರಾಮದ ದೂಪದಕಟ್ಟೆ ರಾಜ್ಯ ಹೆದ್ದಾರಿಯ ಸಮೀಪ ಉದ್ಯಮಿಯೊಬ್ಬರು ಮಂಗಳವಾರ ನಸುಕಿನ ವೇಳೆ ಕಾರಿನಲ್ಲೇ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಿಲೀಪ್ ಎನ್.ಆರ್. ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಕಾರ್ಕಳದ ನಿವಾಸಿಯಾದ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
