ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ 2025 ಘೋಷಣೆಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. 2025ರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು (ಮೇ 2 ರಂದು) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಿದೆ. ಬನ್ನಿ, ಎಸ್ಸೆಸ್ಸೆಲ್ಸಿ ಫಲಿತಾಂಶ ವೀಕ್ಷಣೆ ಹೇಗೆ? ಯಾವ ವೆಬ್ ಸೈಟ್‌ನಲ್ಲಿ ಫಲಿತಾಂಶ ನೋಡಬೇಕು? ಎನ್ನುವುದು ವಿವರವಾಗಿ ತಿಳಿಯೋಣ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಮೇ 2ರಂದು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಲಾಗುತ್ತದೆ.
ಪ್ರಸ್ತುತ, ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿರುವ ರಾಜ್ಯದ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆನ್ಲೈನ್ಲ್ಲಿ ಫಲಿತಾಂಶವನ್ನು ಹೇಗೆ ನೋಡಬೇಕು ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಹಂತ 1: ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ಗಳಾದ https://karresults.nic.in/ ಮತ್ತು kseab.karnataka.gov.in ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿರುವ SSLC ಫಲಿತಾಂಶ 2025 (SSLC Results 2025) ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 3: SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಇದಾದ ಬಳಿಕ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಗೋಚರಿಸುತ್ತದೆ.
ಹಂತ 5: ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಆಫ್ ಲೈನ್‌ನಲ್ಲಿ ಫಲಿತಾಂಶವನ್ನು ನೋಡಲು ಬಯಸುವವರು ತಮ್ಮ ನೋಂದಣಿ ಸಂಖ್ಯೆಯೊಂದಿಗೆ 56263 ಸಂಖ್ಯೆಗೆ ಸಂದೇಶ (ಎಸ್ಎಂಎಸ್) ಕಳುಹಿಸಬಹುದು. ಈ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ.