Friday, June 27, 2025

ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಶನಿವಾರ (ಮೇ.04) ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಿತು.

ದೇವಾಲಯದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಮಸೀದಿಗೆ ಹೋಗಿ ಕೊಟ್ಟ ಕಾರಣ ಮುಸ್ಲಿಮರು ಟ್ಯೂಬ್ ಒಡೆದಿದ್ದಾರೆ. ಅವರಿಗೆ ಆಹ್ವಾನ ಪತ್ರಿಕೆ ಕೊಡಬಾರದಿತ್ತು. ಅವರನ್ನು ಕಾರ್ಯಕ್ರಮಕ್ಕೆ ಕರೆಯಬಾರದಿತ್ತು. ನಾವು ಹಿಂದುಗಳು, ಹಿಂದೂಗಳೇ ಅವರನ್ನು ಸೇರಿಸಬಾರದು” ಎಂದು ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ, ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಿಸಿ ದೂರು ನೀಡಿದ್ದಾರೆ.‌

ಈ ಹಿನ್ನೆಲೆಯಲ್ಲಿ ತಕ್ಕಾರು ಗ್ರಾಮದ ನಿವಾಸಿ ಇಬ್ರಾಹಿಂ ಎಸ್‌.ಬಿ ಎಂಬವರು ದೂರು ನೀಡಿದ್ದಾರೆ. ದೂರು ಆಧಾರದ ಮೇಲೆ ಬಿಎನ್ಎಸ್ಎಸ್ ಕಾಯ್ದೆ 196, 352(2) ಅಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿದೆ.

Related Articles

Latest Articles