Friday, June 27, 2025

ಮಾಜಿ ಶಾಸಕನ ಪುತ್ರನ ಕಾರು ಡಿಕ್ಕಿ: ಒಂದೇ ಕುಟುಂಬದ ಮೂವರು ಮೃತ್ಯು

ಬೆಳಗಾವಿ: ಮಾಜಿ ಶಾಸಕ ಪ್ರಯಾಣಿಸುತ್ತಿದ್ದ ಕಿಯಾ ಕಾರು ಅಲ್ಟೋ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಲ್ಟೋ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮತ್ತೊಂದು ಮಗುವಿಗೆ ಗಂಭೀರ ಗಾಯಗಳಾಗಿದ್ದು, ಕಿಯಾ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಬೆಳಗಾವಿಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದ ಬೈಲಹೊಂಗಲ-ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

ಈ ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಬೆಳಗಾವಿಯಿಂದ ಬೈಲಹೊಂಗಲ ಹೋಗುತ್ತಿದ್ದ ಕಿಯಾ ಕಾರು ಓವರ್ ಟೆಕ್ ಮಾಡಲು ಹೋಗಿ ಎದುರಗಡೆ ಬರುತ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಅಲ್ಟೋ ಕಾರಿನಲ್ಲಿದ್ದ ಗಂಡ ಅಯುಮ್, ಹೆಂಡತಿ, ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದೆ. ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಕೀಯಾ ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಪುತ್ರ ಸೇರಿದಂತೆ ಮತ್ತೊಬ್ಬರು ಗಾಯಗೊಂಡಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಶವಗಳು ಸ್ಥಳೀಯ ಆಸ್ಪತ್ರೆಗೆ ಪೊಲೀಸರು ರವಾನಿಸಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Latest Articles