Friday, June 27, 2025

ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ

ಕಾಮಿಡಿ ಕಿಲಾಡಿಗಳು ಸೀಸನ್ -3’ ವಿನ್ನರ್​ ಆಗಿದ್ದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಹೃದಯಾಘಾತ ಹೊಂದಿ ಅಸುನೀಗಿದ್ದಾರೆ.‌

ಕಾಮಿಡಿ ಕಿಲಾಡಿಗಳು ಸೀಸನ್ 3ರಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಮನರಂಜನೆ ನೀಡುತ್ತಿದ್ದ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಿಯ್ಯಾರಿನ ತಮ್ಮ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಕೇಶ್ ಪೂಜಾರಿ, ಸಂಭ್ರಮದಿಂದ ನೃತ್ಯ ಮಾಡುತ್ತಿದ್ದಾಗ ಹಠಾತ್ತನೆ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕಾರ್ಕಳದ ಖಾಸಗಿ ಗಾಜಿಯಾ ಆಸ್ಪತ್ರೆಗೆ ಮತ್ತು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.

ಕಾಮಿಡಿ ಕಿಲಾಡಿ’ ರಿಯಾಲಿಟಿ ಶೋನ ವಿಜೇತರಾಗಿ ಕರುನಾಡಿನ ಮನೆಮಾತಾಗಿದ್ದ. ಮಲ್ಪೆ ಮೂಲದ ಪ್ರತಿಭಾನ್ವಿತ ಹಾಸ್ಯ ಕಲಾವಿದ ರಾಕೇಶ್‌ ಪೂಜಾರಿ (34) ಅವರು ಮೇ 11ರಂದು ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾದರು. ಅವರ ಈ ಹಠಾತ್ ನಿಧನ ಕಿರುತೆರೆ ಲೋಕಕ್ಕೆ ಹಾಗೂ ಅವರ ಅಭಿಮಾನಿ ಬಳಗಕ್ಕೆ ತೀವ್ರ ಆಘಾತವನ್ನುಂಟುಮಾಡಿದೆ.

ನಟ ರಾಕೇಶ್ ಪೂಜಾರಿ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್​​ನಲ್ಲಿ ಕಾಣಿಸಿಕೊಂಡಿದ್ದಾರೆ.

Related Articles

Latest Articles