Wednesday, June 19, 2024

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನ ಬರ್ಬರ ಹತ್ಯೆ

ಬೆಂಗಳೂರು ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನನ್ನು ಬರ್ಬರ ಹತ್ಯೆ ಮಾಡಿ ಆರು ದುಷ್ಕರ್ಮಿಗಳು ಪರಾರಿ ಆಗಿರುವಂತಹ ಘಟನೆ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ರಾತ್ರಿ 9.30ರ ಸುಮಾರಿಗೆ ನಡೆದಿದೆ.

ಕೋಣನಕುಂಟೆ ಠಾಣಾ ವ್ಯಾಪ್ತಿಯ ಸಹದೇವ್​ ಮೃತ ರೌಡಿಶೀಟರ್​​​​. ಟೀ ಕುಡಿಯಲು ಬೇಕರಿ ಬಳಿ ಬಂದಿದ್ದಾಗ ಮೂರು ಬೈಕ್​ಗಳಲ್ಲಿ ಬಂದಿದ್ದ 6 ದುಷ್ಕರ್ಮಿಗಳ ಗ್ಯಾಂಗ್​ನಿಂದ ಸಹದೇವ್ ಮೇಲೆ ಹತ್ಯೆ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Related Articles

Latest Articles