Monday, September 16, 2024

ಮಾರಕಾಸ್ತ್ರಗಳಿಂದ‌ ಕೊಚ್ಚಿ‌ ಭೀಕರ ಕೊಲೆ

ಶಿವಮೊಗ್ಗ: ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಘಟನೆ ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ನಡೆದಿದೆ. ಮಲ್ಲೇಶ್ (35) ಕೊಲೆಯಾದ ವ್ಯಕ್ತಿ. ಹತ್ಯೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಿವಮೊಗ್ಗದ ಕೋಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗ ಎಸ್​​ಪಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

Related Articles

Latest Articles