ಸ್ಯಾಂಡಲ್ವುಡ್ ಹಿರಿಯ ನಟಿ ಶ್ರುತಿ ಅವರು ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮಂಜುನಾಥನ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಿದ್ದಾರೆ.
ನಟಿ ಶೃತಿ ಅವರು ಪುತ್ರಿ ಗೌರಿ ಜೊತೆಗೆ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಮಂಜುನಾಥನ ದರ್ಶನ ಪಡೆದು ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿದ್ದಾರೆ.
ರಕ್ಷಾ ಬಂಧನದ ಹಿನ್ನೆಲೆಯಲ್ಲಿ ನಟಿ ಶ್ರುತಿ ವೀರೇಂದ್ರ ಹೆಗ್ಗಡೆಯವರ ಕೈಗೆ ರಾಖಿ ಕಟ್ಟಿ ಆಶೀರ್ವಾದ ಪಡೆಯುವ ಮೂಲಕ ವಿಶೇಷವಾಗಿ ರಕ್ಷಾಬಂಧನವನ್ನ ಆಚರಿಸಿದ್ದಾರೆ. ಇನ್ನು ಈ ವಿಶೇಷವಾದ ಫೋಟೋಗಳನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.