Sunday, May 18, 2025

ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಸೀತಾರಾಮ ಸೀರಿಯಲ್‌ನ ವೈಷ್ಣವಿ ಗೌಡ.. ವರ ಯಾರು?

ಅಗ್ನಿಸಾಕ್ಷಿ ಸೀರಿಯಲ್, BIG BOSS Kannada, ಸೀತಾ ರಾಮ​ ಖ್ಯಾತಿಯ ನಟಿ ವೈಷ್ಣವಿ ಗೌಡ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಆ ಮೂಲಕದ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಇಷ್ಟು ದಿನ ಸಿಂಗಲ್​ ಆಗಿದ್ದ ವೈಷ್ಣವಿ ಗೌಡ ಮದುವೆ ಸಂಭ್ರಮದಲ್ಲಿದ್ದಾರೆ.

ಅಗ್ನಿಸಾಕ್ಷಿ ಸೀರಿಯಲ್​ ಮೂಲಕ ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡ ನಟಿ ವೈಷ್ಣವಿ ಗೌಡ. ಏಪ್ರಿಲ್ 14ರಂದು ನಟಿ ವೈಷ್ಣವಿ ಗೌಡ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಉದ್ಯಮಿ ಅಕಾಯ್ ಹಾಗೂ ವೈಷ್ಣವಿ ಗೌಡ ಗುರು ಹಿರಿಯರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ.

ನಟಿ ವೈಷ್ಣವಿ ಗೌಡ ನಿಶ್ಚಿತಾರ್ಥದ ವಿಡಿಯೋಗಳು ಸೋಷಿಯಲ್​ ಮೀಡಿಯಾದಲ್ಲಿ ವೈರಲ್ ಆಗಿವೆ. ವೈಷ್ಣವಿ ಗೌಡ ನಿಶ್ಚಿತಾರ್ಥದ ಸಮಾರಂಭದಲ್ಲಿ ಸ್ಯಾಂಡಲ್​​ವುಡ್​ ಸ್ಟಾರ್​ ನಟಿ ಅಮೂಲ್ಯ ಗೌಡ ದಂಪತಿ ಭಾಗಿಯಾಗಿದ್ದರು. ಅಷ್ಟೇ ಅಲ್ಲದೇ ಕಿರುತೆರೆ ಸ್ಟಾರ್​ ನಟ ನಟಿಯರು ಭಾಗಿಯಾಗಿದ್ದು ಇನ್ನೂ ವಿಶೇಷವಾಗಿತ್ತು.

ಸದ್ಯ ನಟಿ ಝೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಸೀತಾರಾಮ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ. ಇದೇ ಸೀರಿಯಲ್​ನಲ್ಲಿ ನಟಿ ವೈಷ್ಣವಿ ಗೌಡ ಸೀತಾ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅಲ್ಲದೇ ಅಭಿಮಾನಿಗಳು ವೈಷ್ಣವಿ ಗೌಡ ಅವರ ನಟನೆಗೆ ಫಿದಾ ಆಗಿದ್ದಾರೆ.

Related Articles

Latest Articles