ಕೆಚ್ಚೆದೆಯ ಕನ್ನಡತಿ ‘ಅಕ್ಕ ಅನು’ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಸೋಷಿಯಲ್ ಮೀಡಿಯಾದಲ್ಲಿ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಇದೀಗ ಹೊಸ ಲುಕ್ನಲ್ಲಿ ಅಕ್ಕ ಅನು ಕಾಣಿಸಿಕೊಂಡಿದ್ದು ಅಭಿಮಾನಿಗಳು ವಿಧವಿಧವಾಗಿ ರಿಯಾಕ್ಟ್ ಮಾಡಿದ್ದಾರೆ.
ಸರ್ಕಾರಿ ಶಾಲೆ, ದೇವಾಲಯ ಸೇರಿದಂತೆ ಇತರೆ ಪಾರಂಪರಿಕ ತಾಣಗಳಿಗೆ ಹೋಗಿ ಸ್ವಚ್ಛತೆ ಮತ್ತು ಪುನರುಜ್ಜೀವನ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಈ ಬಗ್ಗೆ ಹಲವು ವಿಡಿಯೋಗಳನ್ನು ಸಹ ಅಕ್ಕ ಅನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳುತ್ತಾರೆ. ಈ ನಡುವೆ ಅನು ಅವರ ಹೊಸ ಲುಕ್ಗೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ.
ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರೋ ಫೋಟೋದಲ್ಲಿ ಅಕ್ಕ ಅನು ಹೊಸ ಹೇರ್ ಸ್ಟೈಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಈ ಫೋಟೋ ನೋಡಿದ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಕೆಲವರು ನೀವು ಮೊದಲು ಹೇಗಿದ್ದೀರಿ ಅದೇ ಚೆಂದ ಅಂತಾ ಕಾಮೆಂಟ್ ಮಾಡಿದ್ದಾರೆ.