Saturday, January 25, 2025

ಮಂಗಳೂರು: 90 ಲಕ್ಷ ರೂ‌. ಮೌಲ್ಯದ ಅಂಬರ್ ಗ್ರೀಸ್ ಸಹಿತ ಮೂವರ ಬಂಧನ

ಮಂಗಳೂರು: ಪಣಂಬೂರು ಬೀಚ್ ಬಳಿ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಹೊಂದಿದ್ದ ಮೂವರನ್ನು ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಸೆ. 11ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಉಡುಪಿ ಜಿಲ್ಲೆ ಸಾಲಿಗ್ರಾಮದ ಜಯಕರ (39 ) ಶಿವಮೊಗ್ಗ ಸಾಗರದ ಆದಿತ್ಯ (25) ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾಂವ್ ನ ಲೋಹಿತ್ ಕುಮಾರ್ ಗುರಪ್ಪನವರ್ (39) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮೂವರ ವಶದಿಂದ 90 ಲಕ್ಷ ರೂ. ಮೌಲ್ಯದ 900 ಗ್ರಾಂ ಅಂಬರ್ ಗ್ರೀಸ್ ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಅಪರಾಧ ವಿಭಾಗದ ಅಧಿಕಾರಿಗಳು ಮತ್ತು ಸಿಬಂದಿಗಳು ದಾಳಿಯನ್ನು ನಡೆಸಿದ್ದಾರೆ.

Related Articles

Latest Articles