ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಪ್ರಮುಖ ಕ್ಷೇತ್ರ ಹಾಗೂ ಇಡೀ ದೇಶದ ಚಿತ್ತವೇ ತನ್ನತ್ತ ಸೆಳೆದಿರುವ ಕ್ಷೇತ್ರಗಳಲ್ಲಿ ಅಮೇಥಿಯೂ ಒಂದು. ಕಳೆದ ಬಾರಿ ರಾಹುಲ್ ಗಾಂಧಿಗೆ ಸೋಲುಣಿಸಿದ್ದ ಮೋದಿ ಪಾಳಯದ ಮಹಿಳಾ ಮಣಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಈ ಬಾರಿಯೂ ಕಣಕ್ಕಿಳಿಯಲಿದ್ದಾರೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿಯಲ್ಲಿ ಬಿಜೆಪಿಯಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹಾಗೂ ಪತಿ ಜುಬಿನ್ ಇರಾನಿ ಅವರು ಹಾಜರಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋ ನಡೆಸಿದರು, ಅಮೇಥಿ ಕ್ಷೇತ್ರದಲ್ಲಿ ಐದನೇ ಹಂತದಲ್ಲಿ ಅಂದರೆ ಮೇ 20ರಂದು ಚುನಾವಣೆ ನಡೆಯಲಿದೆ.
ಈ ಸ್ಥಾನಕ್ಕೆ ಇರಾನಿ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರನ್ನು ಸೋಲಿಸಿದ್ದರು. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಈ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ ಇನ್ನು ನಾಲ್ಕು ದಿನಗಳು ಮಾತ್ರ ಬಾಕಿ ಉಳಿದಿವೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾನುವಾರ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಹನುಮಾನ್ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿ ಅಮೇಥಿ ನಿವಾಸಿಗಳ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ಬಿಜೆಪಿ ಮತ್ತೊಮ್ಮೆ ಇರಾನಿ ಅವರನ್ನು ಪಕ್ಷದ ಅಭ್ಯರ್ಥಿ ಎಂದು ಘೋಷಿಸಿದೆ. 2019ರಲ್ಲಿ ಇರಾನಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು 55,000 ಮತಗಳ ಅಮತರದಿಂದ ಸೋಲಿಸಿದ್ದರು. ಅಮೇಥಿಯಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ, ಅಮೇಥಿಯಲ್ಲಿ ಐದನೇ ಹಂತದ ಮತದಾನ ಮೇ20ರಂದು ನಡೆಯಲಿದೆ.
ಆದರೆ ಇದುವರೆಗೆ ಕಾಂಗ್ರೆಸ್ ಅಮೇಥಿ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ, ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಊಹಾಪೋಹಗಳು ಕೂಡ ಕೇಳಿಬಂದಿತ್ತು. ನಾಮಪತ್ರ ಸಲ್ಲಿಕೆಗೆ ಇನ್ನೇನು ಬೆರಳೆಣಿಕೆಯ ದಿನಗಳು ಮಾತ್ರ ಬಾಕಿ ಇದ್ದು ಅಷ್ಟರೊಳಗೆ ಸಂಪೂರ್ಣ ಚಿತ್ರಣ ಸಿಗಲಿದೆ.