ಆಂಧ್ರಪ್ರದೇಶದ ವಿಜಯನಗರದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದ್ದು, 50ಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಅಲಮಂದ, ಕಂತಕಪಲ್ಲಿ ಸೆಕ್ಷನ್ ನಡುವೆ ಸಂಭವಿಸಿದ ರೈಲು ಅಪಘಾತದ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜತೆ ಮಾತನಾಡಿದರು ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.
ಸಂತಾಪ ಸೂಚಿಸಿದ ಪ್ರಧಾನಿ: ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ
ರೈಲ್ವೆ ಸಚಿವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ, ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.