ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಆರೋಪದಲ್ಲಿ ಬಂಧನವಾಗಿರುವ ಪ್ರಖರ ವಾಗ್ಮಿ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಬಟ್ಟೆ ಅಂಗಡಿ ತೆರೆಯುವ ಹೆಸರಿನಲ್ಲಿ 5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ ನೀಡಿದ ದೂರಿನ ಮೇರೆಗೆ ಚೈತ್ರಾ ಕುಂದಾಪುರ ವಿರುದ್ಧ ಉಡುಪಿಯ ಕೋಟ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬ್ರಹ್ಮಾವರದ ಸುದಿನ ಎಂಬುವವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ವೃತ್ತ ವ್ಯಾಪ್ತಿಯ ಕೋಟ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಹಿಂದು ಧ್ವಜ, ಕೇಸರಿ ಬಂಟಿಗ್ಸ್ ಉದ್ಯಮ ಆರಂಭಿಸುವುದಾಗಿ ಸುಮಾರು 5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.