ಏಷ್ಯನ್ ಗೇಮ್ಸ್ 2023ರ ಮಹಿಳಾ ಜಾವೆಲಿನ್ ಥ್ರೋನಲ್ಲಿ 62.92 ಮೀಟರ್ ದೂರ ಎಸೆದ ಅಣ್ಣು ರಾಣಿ ಚಿನ್ನದ ಪದಕ ಗೆದ್ದಿದ್ದಾರೆ. ಉತ್ತರ ಪ್ರದೇಶ ಮೂಲದ ಜಾವೆಲಿನ್ ಎಸೆತಗಾರಾಗಿರುವ ಇವರು ಪ್ರಬಲ ಪ್ರದರ್ಶನ ತೋರಿದ್ದಾರೆ.
ಭಾರತದಕ್ಕೆ ಮತ್ತೊಂದು ಸ್ವರ್ಣ ಪದಕ ಸಿಕ್ಕಿದ್ದು, ಮಹಿಳೆಯರ 5000 ಮೀಟರ್ ಓಟದಲ್ಲಿ ಪಾರುಲ್ ಚೌಧರಿ ಚಿನ್ನದ ಗೆದ್ದಿದ್ದಾರೆ.
10ನೇ ದಿನದಲ್ಲಿ ಭಾರತದ ಫಲಿತಾಂಶಗಳು
ಮಹಿಳೆಯರ 5000 ಮೀಟರ್ ಓಟದಲ್ಲಿ ಪಾರುಲ್ ಚೌಧರಿ ಚಿನ್ನದ ಪದಕ ಗೆದ್ದಿದ್ದಾರೆ.
ಜಾವೆಲಿನ್ ಥ್ರೋನಲ್ಲಿ 62.92 ಮೀಟರ್ ದೂರ ಎಸೆದ ಅಣ್ಣು ರಾಣಿ ಚಿನ್ನದ ಪದಕ ಗೆದ್ದಿದ್ದಾರೆ.
800 ಮೀಟರ್ ಓಟದ ಸ್ಪರ್ಧೆಯಲ್ಲಿ ಮೊಹಮ್ಮದ್ ಅಫ್ಸಲ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಮಹಿಳೆಯರ 400 ಮೀಟರ್ ಹರ್ಡಲ್ಸ್ನಲ್ಲಿ ವಿಥ್ಯಾ ರಾಮ್ರಾಜ್ ಕಂಚಿನ ಪದಕ ಗೆದ್ದಿದ್ದಾರೆ.
ಮಹಿಳೆಯರ 54 ಕೆಜಿ ಬಾಕ್ಸಿಂಗ್ನಲ್ಲಿ ಪ್ರೀತಿ ಪವಾರ್ ಕಂಚಿನ ಪದಕ ಗೆದ್ದಿದ್ದಾರೆ.
ಪುರುಷರ ಕ್ಯಾನೋ ಡಬಲ್ 1000 ಮೀಟರ್ನಲ್ಲಿ ಅರ್ಜುನ್ ಸಿಂಗ್ ಮತ್ತು ಸುನಿಲ್ ಸಿಂಗ್ ಕಂಚಿನ ಪದಕ ಗೆದ್ದಿದ್ದಾರೆ.
ಪುರುಷರ ಕ್ರಿಕೆಟ್: ನೇಪಾಳವನ್ನು 23 ರನ್ ಗಳಿಂದ ಮಣಿಸಿದ ಭಾರತ ಸೆಮಿಫೈನಲ್ ಗೆ
ಕಬಡ್ಡಿ: ಭಾರತ ಪುರುಷರ ತಂಡ ಬಾಂಗ್ಲಾದೇಶ ವಿರುದ್ಧ 55-18, ಮಹಿಳಾ ತಂಡ ದಕ್ಷಿಣ ಕೊರಿಯಾ ವಿರುದ್ಧ 56-23 ಅಂತರದಲ್ಲಿ ಜಯ ಸಾಧಿಸಿತು.
ಮಹಿಳಾ ಹಾಕಿ: ಹಾಂಕಾಂಗ್ ವಿರುದ್ಧ ಭಾರತಕ್ಕೆ 13-0 ಅಂತರದ ಗೆಲುವು