ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡಾನೆ ದಾಳಿ ಗೆ ಮತ್ತೊಂದು ಜೀವ ಬಲಿಯಾಗಿದೆ. ತಿಂಗಳ ಹಿಂದೆ ಕಡಬದ ಐತ್ತೂರು ಸಮೀಪ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಅವರು ಚಿಕಿತ್ಸೆ ಫಲಕಾರಿಯಾಗದೆ ನ.7 ರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭಿರ ಗಾಯಗೊಂಡಿದ್ದರು.
ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ತರಲಾಗಿತ್ತು.ಆದ್ರೆ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.