ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಬೆಳವಣಿಗೆಯಾಗಿದೆ. ನಳೀನ್ ಕುಮಾರ್ ಕಟೀಲ್ ಅವರ ನಂತರ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಅನ್ನುವ ಪ್ರಶ್ನೆಗೆ ಅಂತಿಮ ಚುಕ್ಕೆ ಬಿದ್ದಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ಹೈಕಮಾಂಡ್ ರಾಜ್ಯ ಭಾರತೀಯ ಜನತಾ ಪಕ್ಷದ ಗದ್ದುಗೆ ನೀಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಕ್ಷಣವೇ ಜಾರಿ ಬರುವಂತೆ, ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿ ಎಂದು ಆದೇಶಿಸಿದ್ದಾರೆ.
ಈ ಮೂಲಕ ಯಡಿಯೂರಪ್ಪ ಅವರಿಗೆ ಬಿಜೆಪಿ ದೀಪಾವಳಿ ಗಿಫ್ಟ್ ನೀಡಿದೆ. ಮೇ ತಿಂಗಳಲ್ಲೇ ಎಲೆಕ್ಷನ್ ಮುಗಿದಿತ್ತು, ಹೊಸ ಸರ್ಕಾರ ಬಂದು ಸುಮಾರು 7 ತಿಂಗಳೇ ಕಳೆದಿತ್ತು. ಹೀಗಿದ್ರು ಕೂಡ ಬಿಜೆಪಿ ಹೈಕಮಾಂಡ್ ವಿರೋಧ ಪಕ್ಷ ನಾಯಕ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನೂ ನೇಮಕ ಮಾಡಿರಲಿಲ್ಲ.