ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಬಾಲಮಂಜುನಾಥ ಸ್ವಾಮೀಜಿ ಅವರದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.
ಬಾಲಕಿ ಜೊತೆ ವಿಡಿಯೋ ಕಾಲ್ ನಲ್ಲಿ ಬೆತ್ತಲಾಗಿ ಮಾತನಾಡುತ್ತಿರುವ 37 ಸೆಕೆಂಡ್ ಗಳ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದೆ.
ಈಗಾಗಲೇ ಬಾಲಮಂಜುನಾಥ್ ಸ್ವಾಮೀಜಿ ಹಾಗೂ ಅವರ ಆಪ್ತ ಸಹಾಯಕ ಸೇರಿದಂತೆ ಮೂವರ ವಿರುದ್ಧ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಹುಲಿಯೂರು ದುರ್ಗ ಪೊಲೀಸರು ಬಂಧಿಸಿದ್ದಾರೆ. ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ತನಿಖೆ ನಡೆಸಲಾಗುತ್ತಿದೆ.