Monday, December 9, 2024

5 ಕೋಟಿ ಹಣ, ಕೆಜಿಗಟ್ಟಲೆ ಚಿನ್ನ, ಮೂಟೆಗಟ್ಟಲೆ ಬೆಳ್ಳಿ ಜಪ್ತಿ

ಲೋಕಸಭಾ ಚುನಾವಣೆ 2024: ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ಚುನಾವಣಾ ಆಯೋಗವು ಹಲವು ಕ್ರಮಗಳನ್ನು ಕೈಗೊಂಡಿದೆ. ಇದರಲ್ಲಿ ಮತದಾರರಿಗೆ ಆಮಿಷ ವಡ್ಡಲು ಅಕ್ರಮವಾಗಿ ಸಾಗಿಸುವ ಹಣ ಅಥವಾ ವಸ್ತುಗಳ ಮೇಲೆ ಆಯೋಗ ಕಣ್ಣಿಟ್ಟಿದೆ.

ಬಳ್ಳಾರಿ ನಗರದ ಕಂಬಳಿ ಬಜಾರ್‌ನಲ್ಲಿ ಚುನಾವಣಾಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಚಿನ್ನದ ಆಭರಣ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಹೇಮಾ ಜ್ಯುವೆಲರ್ಸ್‌ ಮಾಲೀಕ ನರೇಶ್ ಸೋನಿಗೆ ಎಂಬುವರಿಗೆ ಸೇರಿದ ಹಣ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಕೋಟಿ 60 ಲಕ್ಷ ನಗದನ್ನು ಚುನಾವಣಾ ಆಯೋಗದ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

ಅಧಿಕಾರಿಗಳ ತಪಾಸಣೆ ವೇಳೆ ನಗದು ಮಾತ್ರವಲ್ಲದೆ 3 ಕೆ.ಜಿ ಚಿನ್ನ, 68 ಕೆ.ಜಿ ಬೆಳ್ಳಿ ಗಟ್ಟಿ, 103 ಕೆ.ಜಿ ಬೆಳ್ಳಿ ಆಭರಣಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

Related Articles

Latest Articles