ಬಂಟ್ವಾಳ: ಮುಸ್ಲಿಮರ ಧಾರ್ಮಿಕ ಕ್ಷೇತ್ರ ಮೆಕ್ಕಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಾರಣಕ್ಕಾಗಿ ಯುವಕನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿ, ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿ ಯುವಕ ಮೆಕ್ಕಾದ ಬಗ್ಗೆ ಅವಹೇಳನಕಾರಿಯಾಗಿ Instagram ಖಾತೆಯಲ್ಲಿ ಕಮೆಂಟ್ ಹಾಕಿದ್ದರಿಂದ ಮುಸ್ಲಿಂ ಸಮುದಾಯದವರಲ್ಲಿ ಭಾವನೆಗಳಿಗೆ ಧಕ್ಕೆ ಉಂಟು ಮಾಡಿ, ಸಮಾಜದಲ್ಲಿ ಧರ್ಮ, ಧರ್ಮಗಳ ಮಧ್ಯೆ ಕೋಮುಭಾವನೆಗಳನ್ನು ಕೆರಳಿಸಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.