ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು. 25ರ ಸಂಜೆ ಮೃತಪಟ್ಟಿದ್ದಾರೆ.
ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕಾನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃತಪಟ್ಟವರು.
ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಇವರಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದರು.
ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.