
ಬೆಂಗಳೂರು: ಪಕ್ಷ ವಿರೋಧಿ ಹೇಳಿಕೆ ನೀಡಿದ ಹಿನ್ನೆಲೆ ಬಿಜೆಪಿಯಿಂದ ಶಾಸಕ ಬಸನಗೌಡ ಯತ್ನಾಳ್ ಗೇಟ್ಪಾಸ್ ನೀಡಲಾಗಿದೆ. 2 ಬಾರಿ ನೋಟಿಸ್ ಕೊಟ್ಟರೂ ಡೋಂಟ್ ಕೇರ್ ಎಂದಿದ್ದ ಯತ್ನಾಳ್ಗೆ ಬಿಜೆಪಿ ಹೈಕಮಾಂಡ್ ಚಾಟಿ ಬೀಸಿದೆ.
ಬಸನಗೌಡ ಯತ್ನಾಳ್ ಅವರನ್ನ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷದವರೆಗೆ ಎಕ್ಸ್ಪೆಲ್ ಮಾಡಲಾಗಿದ್ದು, ರಾಜ್ಯ ಕೇಸರಿ ಪಡೆಯಲ್ಲಿ ಬಿರುಗಾಳಿ ಎಬ್ಬಿಸಿದೆ.

ಈ ಮಹತ್ತರ ಆದೇಶದ ಬೆನ್ನಲ್ಲೇ ರೆಬೆಲ್ಸ್ ಟೀಮ್ ಸೈಲೆಂಟ್ ಆಗಿದೆ. ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಅವರಿಗೂ ಉಚ್ಛಾಟನೆ ಭೀತಿ ಕಾದಿದೆಯಾ ಎಂಬ ಪ್ರಶ್ನೆ ಎದ್ದಿದೆ.
ಸೋಮಶೇಖರ್, ಹೆಬ್ಬಾರ್ ಮಾತ್ರವಲ್ಲದೇ ಒಟ್ಟು ಬಿಜೆಪಿ ನಾಯಕರಿಗೆ ಉಚ್ಛಾಟನೆಯ ಆತಂಕ ಶುರುವಾಗಿದೆ ಎನ್ನಲಾಗುತ್ತಿದೆ.
ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಬಿ.ಪಿ ಹರೀಶ್, ಜಿ.ಎಂ.ಸಿದ್ದೇಶ್ವರ್, ಪ್ರತಾಪ್ ಸಿಂಹ, ಅಣ್ಣಾಸಾಹೇಬ ಜೊಲ್ಲೆ, ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರಿಗೆ ಆತಂಕ ಶುರುವಾಗಿದೆ.
ಕೇಂದ್ರ ಶಿಸ್ತು ಸಮಿತಿ ನೀಡಿದ್ದ ನೀಡಿದ್ದ ಶೋಕಾಸ್ ನೋಟಿಸ್‌ಗೆ ನೀವು ನೀಡಿದ್ದ ಪ್ರತಿಕ್ರಿಯೆಯನ್ನು ಪರಿಗಣಿಸಿದ್ದೇವೆ. ಉತ್ತಮ ನಡವಳಿಕೆ ಭರವಸೆ ನೀಡಿದ ಬಳಿಕವೂ ಪಕ್ಷದ ಶಿಸ್ತನ್ನು ಮತ್ತೆ ಮತ್ತೆ ಉಲ್ಲಂಘಿಸಿದ್ದೀರಿ. ಹೀಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ನಿಮ್ಮನ್ನು ಉಚ್ಚಾಟನೆ ಮಾಡಿದ್ದೇವೆ ಎಂದು ಕೇಂದ್ರ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಆದೇಶದಲ್ಲಿ ತಿಳಿಸಿದ್ದಾರೆ.