ತಹಶೀಲ್ದಾರ್ ಕಚೇರಿ ಆವರಣದಲ್ಲಿಯೇ ಪೊಲೀಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿಯೇ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಕಾನ್ಸ್‌ಟೇಬಲ್ ಮುರಕಿಬಾಂವಿ ಗ್ರಾಮದ ಬಸನಗೌಡ ಈರಪ್ಪ ಗೌಡರ (40) ಎಂದು ತಿಳಿದು ಬಂದಿದೆ. ಇವರು ಬೈಲಹೊಂಗಲ ತಾಲೂಕಿನ ದೊಡವಾಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಜೀವನದಲ್ಲಿ ಜಿಗುಪ್ಸೆ ಹೊಂದಿ ಕುಡಿದ ಮತ್ತಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಗಿ ಪತ್ನಿ ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾರೆ. ಕುಡಿಯುವುದು ಬಿಡಿ, ಮಕ್ಕಳು, ಮಡದಿ ಬಗ್ಗೆ ಗಮನ ಕೊಡಿ, ಮಕ್ಕಳ ಶಾಲೆ ಫೀಸ್ ಕಟ್ಟಬೇಕು ಎಂದು ಹೇಳಿದ್ದೆ. ಇದೀಗ ನೇಣಿಗೆ ಶರಣಾಗಿದ್ದಾರೆ ಎಂದು ಮೃತ ಪೇದೆ ಪತ್ನಿ ಅಳಲು ತೋಡಿಕೊಂಡಿದ್ದಾರೆ.