ದಕ್ಷಿಣ ಕನ್ನಡ: ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ನಡೆದಿದೆ.
ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ.
ಢಿಕ್ಕಿ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುವನ್ನಯ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್ ಎಂದು ತಿಳಿದು ಬಂದಿದೆ.