Saturday, June 22, 2024

ಬೆಳ್ತಂಗಡಿ: ಸ್ಕೂಟರ್ ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಬೆಳ್ತಂಗಡಿ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ.‌

ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಅಪಘಾತ‌ ನಡೆದಿದೆ. ಶೇಖರ್ ಬಂಗೇರ ಹೇರಾಜೆ(65) ಮೃತಪಟ್ಟ ವ್ಯಕ್ತಿ. ಇವರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ, ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಂಟ್ವಾಳದಲ್ಲಿ ಸಾವನ್ನಪ್ಪಿದ್ದಾರೆ. ಯುವತಿಗೆ ಸಹ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟರ್ ಸವಾರೆಯನ್ನು ಗೇರುಕಟ್ಟೆಯ ಅನುಷಾ ಎಂದು ಗುರುತಿಸಲಾಗಿದೆ.

ಮೃತಪಟ್ಟ ಶೇಖರ್‌ ಬಂಗೇರ ಹೇರಾಜೆ ಮಾಜಿ ವಿಜಯ ಬ್ಯಾಂಕ್ ಉದ್ಯೋಗಿ, ಮುಗ್ಗ ಗುತ್ತು ಮನೆತನದ ಟ್ರಸ್ಟ್ ಕೋಶಾಧಿಕಾರಿ, ರಾಘವೇಂದ್ರ ಮಠದ ಕೋಶಾಧಿಕಾರಿ, ಗುರುನಾರಾಯಣ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಮಾವ.

Related Articles

Latest Articles