Tuesday, March 18, 2025

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕೋಡಿ ನಿವಾಸಿ ವಿದ್ಯಾರ್ಥಿನಿ ಹೃಶ್ವಿ‌ (17) ವಿಷ ಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನ. 26ರಂದು ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು, ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

Related Articles

Latest Articles