ಬೆಂಗಳೂರು: ಕೊರಮಂಗಲದ ಫೋರಂ ಮಾಲ್ ಮುಂಭಾಗದ ಮಾರುತಿ ಕಾರು ಷೋ ರೂಂನ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ನಾಲ್ಕನೇ ಮಹಡಿಯಲ್ಲಿದ್ದ ಮಡ್ ಪೈಪ್ ಹುಕ್ಕಾ ಕೆಫೆನಲ್ಲಿದ್ದ ಕಟ್ಟಡದಲ್ಲಿದ್ದ ಸಿಲಿಂಡರ್ಗಳು ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣ ಉಳಿಸಿಕೊಳ್ಳಲು ಪ್ರೇಮ್ ಎಂಬುವರು ನಾಲ್ಕನೇ ಮಹಡಿಯಿಂದ ಗಿಡದ ಮೇಲೆ ಜಿಗಿದಿದ್ದಾರೆ. ಅವರಿಗೆ ಗಾಯಗಳಾಗಿದ್ದು, ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಕ್ಕದ ಕಟ್ಟಡಕ್ಕೂ ಬೆಂಕಿ ಹರಡಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಾಲ್ಕು ಮಹಡಿಯ ಕಟ್ಟಡದಲ್ಲಿ, ಗ್ರೌಂಡ್ ಮತ್ತು ಮೊದಲ ಮಹಡಿಯಲ್ಲಿ ಕಾರು ಷೋ ರೂಂ ಇದೆ. ಎರಡು ಮತ್ತು ಮೂರನೇ ಮೂರನೇ ಮಹಡಿಯಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿದೆ. ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆರನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಹುರಿತಿತ್ತು. ಬೆಂಕಿ ಐದನೇ ಮಹಡಿಗೂ ಆವರಿಸಿತ್ತು. ಅಲ್ಲಿ ಸದ್ಯ ಯಾರು ಇರಲಿಲ್ಲ. ಒಟ್ಟು ಆರು ಗ್ಯಾಸ್ ಸಿಲಿಂಡರ್ಗಳಿದ್ದವು. ನಾಲ್ಕು ಬ್ಲಾಸ್ಟ್ ಆಗಿವೆ, ಇನ್ನು ಎರಡು ಸಿಲೆಂಡರ್ಗಳು ಬ್ಲಾಸ್ಟ್ ಆಗದ ಹಾಗೆ ಮಾಡಿದ್ದೇವೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.