Wednesday, July 24, 2024

ವಾಟರ್ ಟ್ಯಾಂಕರ್ ಬೈಕ್ ಗೆ ಡಿಕ್ಕಿ : ಅಕ್ಕ, ತಮ್ಮ ಮೃತ್ಯು

ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡ ನಾಗಮಂಗಲದಲ್ಲಿ ವಾಟರ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅಕ್ಕ ಮತ್ತು ತಮ್ಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮಧುಮಿತಾ (20) ರಂಜನ್ (18) ಮೃತ ದುರ್ದೈವಿಗಳು.

ಮದುಮಿತಾ ಬೆಂಗಳೂರಿನ ಎಸ್ಎಸ್ಎಂಆರ್‌ವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಾಲೇಜಿನ ಮೊದಲ ದಿನ ಹಿನ್ನೆಲೆಯಲ್ಲಿ ಅಕ್ಕ ಮದುಮಿತಾರನ್ನು ಕಾಲೇಜಿಗೆ ಬಿಟ್ಟು ಬರಲು ತಮ್ಮ ರಂಜನ್ ಹೋಗುತ್ತಿದ್ದ ವೇಳೆ, ವೇಗವಾಗಿ ಬಂದ ವಾಟರ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಅಕ್ಕ ಮತ್ತು ತಮ್ಮ ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ. ಬಳಿಕ ವಾಟರ್ ಟ್ಯಾಂಕರ್ ನ ಹಿಂಬದಿ ಚಕ್ರ ಇಬ್ಬರ ತಲೆ ಮೇಲೆ ಹರಿದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಾಟರ್ ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಾಟರ್ ಟ್ಯಾಂಕರ್ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಅಂತ ಸ್ಥಳೀಯರು ಆರೋಪಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Latest Articles