ಕೋಲಾರ: ಬ್ಯಾರಿಕೇಡ್ಗೆ ಬೈಕ್ ಡಿಕ್ಕಿ ಹೊಡೆದು ಪೊಲೀಸ್ ಪೇದೆ ಮೃತಪಟ್ಟ ಘಟನೆ ತಾಲೂಕಿನ ಮಾರಿಕುಪ್ಪಂ ಬಳಿ ನಡೆದಿದೆ. ಚಿರಂಜೀವಿ (37) ಮೃತ ಪೊಲೀಸ್ ಪೇದೆ ಎಂದು ಗುರುತಿಸಲಾಗಿದೆ.
ಮೂರು ದಿನಗಳ ಹಿಂದೆ ರಸ್ತೆ ಬದಿ ನಿಲ್ಲಿಸಿದ್ದ ಬ್ಯಾರಿಕೇಡ್ಗೆ ಪೊಲೀಸ್ ಕಾನ್ಸ್‌ಟೇಬಲ್ ಡಿಕ್ಕಿ ಹೊಡೆದಿದ್ದರು. ಪರಿಣಾಮ ಪೊಲೀಸ್ ಪೇದೆ ಚಿರಂಜೀವಿ ಅವರು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಇಂದು ಚಿಕಿತ್ಸೆಗೆ ಫಲಿಸದೇ ಕೆಜಿಎಫ್ ಡಿಎಆರ್ ಪೊಲೀಸ್ ಪೇದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.