Monday, September 16, 2024

ಸಂಸದ ಡಾ. ಉಮೇಶ್​ ಜಾಧವ್ ಆಪ್ತನ ಬರ್ಬರ ಹತ್ಯೆ

ಸಂಸದ ಡಾ. ಉಮೇಶ್​ ಜಾಧವ್ ಬೆಂಬಲಿಗನೂ ಆಗಿರುವ ಬಿಜೆಪಿ ಮುಖಂಡರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿಯ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಗಿರೀಶ್ ಚಕ್ರ ಎಂದು ಗುರುತಿಸಲಾಗಿದೆ.

ನಾಲ್ಕು ದಿನಗಳ ಹಿಂದೆಯಷ್ಟೇ BSNL ಸಲಹಾ ಸಮಿತಿ ನಿರ್ದೇಶಕರನ್ನಾಗಿ ಗಿರೀಶ್ ಅವರನ್ನು ಸಂಸದ ಉಮೇಶ್ ಜಾಧವ್ ನೇಮಕ ಮಾಡಿದ್ದರು.

ಈ ಹಿನ್ನೆಲೆ ಪಾರ್ಟಿ ಕೊಡುವುದಾಗಿ ನಂಬಿಸಿ ಗಿರೀಶ್ ಚಕ್ರ ಅವರನ್ನು ಸ್ನೇಹಿತರೇ ಜಮೀನಿಗೆ ಕರೆಸಿದ್ದರು. ಅದರಂತೆ ಜಮೀನಿಗೆ ಬಂದ ಗಿರೀಶ್ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಗಾಣಗಾಪುರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Related Articles

Latest Articles