Monday, October 14, 2024

ವೇಶ್ಯಾವಾಟಿಕೆ ದಂಧೆ ಆರೋಪ: ಬಿಜೆಪಿ ನಾಯಕ ಅರೆಸ್ಟ್

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸಬ್ಯಸಾಚಿ ಘೋಷ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸಂದೇಶ್‌ಖಾಲಿಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಹಾಗೂ ಬಿಜೆಪಿ ನಡುವೆ ಕಿತ್ತಾಟ ಏರ್ಪಟ್ಟಿರುವ ಸಮಯದಲ್ಲೇ ಈ ಘಟನೆ ವರದಿಯಾಗಿದೆ.

ಬಿಜೆಪಿಯ ಮೇಲಿನ ಟೀಕೆಗಳನ್ನು ಹೆಚ್ಚಿಸಿರುವ ಟಿಎಂಸಿ, ಹೌರಾದ ಸಬ್ಯಸಾಚಿ ಘೋಷ್ ಅವರ ಹೋಟೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಬಂಗಾಳ ಪೊಲೀಸರು ಭೇದಿಸಿದ್ದಾರೆ ಎಂದು ಆರೋಪಿಸಿದೆ.

ಈ ವಿಚಾರವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಟಿಎಂಸಿ, ಬಂಗಾಳದ ಬಿಜೆಪಿ ನಾಯಕ ಸಬ್ಯಸಾಚಿ ಘೋಷ್ ಹೌರಾದ ಸಂಕ್ರೈಲ್‌ನಲ್ಲಿರುವ ತನ್ನ ಹೋಟೆಲ್‌ನಲ್ಲಿ ಅಪ್ರಾಪ್ತ ಬಾಲಕಿಯರ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಪೊಲೀಸರು 11 ಆರೋಪಿಗಳನ್ನು ಬಂಧಿಸಿದ್ದಾರೆ ಮತ್ತು 6 ಸಂತ್ರಸ್ತರನ್ನು ಸ್ಥಳದಿಂದ ರಕ್ಷಿಸಿದ್ದಾರೆ ಎಂದು ಬರೆಯಲಾಗಿದೆ.

ಸಂದೇಶಖಾಲಿ ವಿಷಯದ ಕುರಿತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಬಿಜೆಪಿ ಮಹಿಳಾ ಕಾರ್ಯಕರ್ತರ ನಿಯೋಗವು ಒಂದು ದಿನದ ಹಿಂದೆ ಈ ಪ್ರಕ್ಷುಬ್ಧ ಪ್ರದೇಶಕ್ಕೆ ಭೇಟಿ ನೀಡದಂತೆ ತಡೆಯಲಾಗಿತ್ತು. ಈ ಘಟನೆಯನ್ನು ಉಲ್ಲೇಖಿಸಿ ಪೊಲೀಸರು ಸಂದೇಶಖಾಲಿಗೆ ಪ್ರವೇಶವನ್ನು ನಿರಾಕರಿಸಿದ್ದು, ರಾಜ್ಯ ಸರ್ಕಾರ ಸತ್ಯವನ್ನು ಮರೆಮಾಚಲು ಪ್ರಯತ್ನಿಸುತ್ತಿದೆ ಎಂದು ಶಾಸಕ ಅಗ್ನಿಮಿತ್ರ ಪಾಲ್ ಆರೋಪಿಸಿದ್ದಾರೆ.

Related Articles

Latest Articles