ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಳಿಕ ಮಗನ ಪರ ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪ್ರಚಾರ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಯಡಿಯೂರಪ್ಪ, ರಾಘವೇಂದ್ರ ಮೂರು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಹೇಳಿದರು.
ಮುಂದುವರಿದು ಮಾತಾಡಿದ ಅವರು, ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು ಆಗಿದೆ, ಪ್ರಧಾನಿ ನರೇಂದ್ರ ಮೋದಿಯವರಿಗೆ ಸರಿಸಾಟಿಯಾಗಿ ನಿಲ್ಲುವ ಒಬ್ಬ ನಾಯಕನೂ ಆ ಪಕ್ಷದಲ್ಲಿಲ್ಲ, ಮೋದಿಯವರು ಇಡೀ ವಿಶ್ವವೇ ಮೆಚ್ಚಿದ ನಾಯಕನಾಗಿದ್ದಾರೆ ಎಂದರು.
ರಾಜ್ಯದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಮತ್ತು ಪ್ರಧಾನಿ ಮೋದಿ ಒಂದಾಗಿದ್ದಾರೆ, ಹಾಗಾಗಿ ಈ ಬಾರಿ ರಾಜ್ಯದ ಎಲ್ಲ 28 ಕ್ಷೇತ್ರಗಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವುದು ಶತಸಿದ್ಧ ಎಂದು ಅವರು ಹೇಳಿದರು. ತಮ್ಮ ಕುಟುಂಬದ ವಿರುದ್ಧ ಬಂಡಾಯದ ಕಹಳೆ ಮೊಳಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆಎಸ್ ಈಶ್ವರಪ್ಪ ವಿರುದ್ಧ ಕಿಡಿಕಾರಿದ ಯಡಿಯೂರಪ್ಪ, ಮುಂದಿನ ದಿನಗಳಲ್ಲಿ ಯಾವುದೇ ನಾಯಕ ಪಕ್ಷದ ವಿರುದ್ಧ ಬಂಡಾಯ ಪ್ರವೃತ್ತಿ ತೋರಿ ಚುನಾವಣೆಯಲ್ಲಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈಹಾಕಿರಬಾರದು, ಅಂಥ ಸೋಲನ್ನು ಈಶ್ವರಪ್ಪ ಉಣಿಸಬೇಕಿದೆ ಎಂದರು.