ಸಾಮಾನ್ಯವಾಗಿ ಟಿಕೆಟ್ ಪೇಪರ್ ರೋಲ್ಗಳನ್ನು ಪ್ರಯಾಣಿಕರಿಗೆ ಟಿಕೆಟ್ ನೀಡಲು ಬಳಸುತ್ತಾರೆ. ಆದರೆ, ಟಿಕೆಟ್ ನೀಡಲು ಬಳಸುವ ಎಲೆಕ್ಟ್ರಿಕ್ ಬಸ್ನ ಪೇಪರ್ ಟಿಕೆಟ್ ರೋಲ್ ಅನ್ನು ಇಲ್ಲೊಬ್ಬ ವ್ಯಾಪಾರಿ ಹಣ್ಣು ಹಾಗೂ ತರಕಾರಿ ಅಂಗಡಿಯಲ್ಲಿ ಗ್ರಾಹಕರಿಗೆ ಬಿಲ್ ಕೊಡಲು ಬಳಸುತ್ತಿದ್ದಾನೆ!
ಬೆಂಗಳೂರಿನ ಯಲಹಂಕದ ಅಟ್ಟೂರು ಲೇಔಟ್ನ ಎಸ್ಆರ್ಎಸ್ ತರಕಾರಿ ಹಾಗೂ ಹಣ್ಣು ವ್ಯಾಪಾರಿ ಮಳಿಗೆಯಲ್ಲಿ ಟಿಕೆಟ್ ರೋಲ್ ಉಪಯೋಗಿಸಿ, ತರಕಾರಿ ಹಾಗೂ ಹಣ್ಣಿನ ರೇಟ್ ಮುದ್ರಿಸಿ ಕೊಟ್ಟಿದ್ದ. ಈ ಬಗ್ಗೆ ಸಾರ್ವಜನಿಕರು ಸೋಶಿಯಲ್ ಮೀಡಿಯಾದಲ್ಲಿ ಬಿಎಂಟಿಸಿಗೆ ಮಾಹಿತಿ ನೀಡಿದ್ದರು. ಬಿಎಂಟಿಸಿ ಅಧಿಕಾರಿಗಳು ಅಂಗಡಿಗೆ ಹೋಗಿ ಪರಿಶೀಲಿಸಿದಾಗ ಎರಡು ಟಿಕೆಟ್ ರೋಲ್ ಪತ್ತೆಯಾಗಿದೆ.
ವ್ಯಾಪಾರಿ ಮುರಳಿಕೃಷ್ಣ ಮೇಲೆ ಯಲಹಂಕ ನ್ಯೂ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮಾತನಾಡಿದ ಸಾರಿಗೆ ನೌಕರರ ಮುಖಂಡರು, ಇದು ಬಿಎಂಟಿಸಿ ಭದ್ರತಾ ಮತ್ತು ಜಾಗೃತದಳದ ಅಧಿಕಾರಿಗಳ ನಿರ್ಲಕ್ಷ್ಯ ಎಂದಿದ್ದಾರೆ.