ಹಾವೇರಿ: ಬಸ್ಸಿನಲ್ಲಿ ಪ್ರಯಾಣಿಕರಿದ್ದರೂ, ಬಸ್ಸಿನಲ್ಲೇ ಚಾಲಕ ನಮಾಜ್ ಮಾಡಿದ ಘಟನೆ ನಡೆದಿದೆ. ಬಸ್ಸನ್ನು ನಿಲ್ಲಿಸಿ ನಮಾಝ್ ಮಾಡಿದ್ದಾನೆ.
ಏಪ್ರಿಲ್ 29ರ ಸಂಜೆ ಹುಬ್ಬಳ್ಳಿಯಿಂದ ಹಾವೇರಿಯತ್ತ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ಸನ್ನು ಮಾರ್ಗಮಧ್ಯ ನಿಲ್ಲಿಸಿ ಚಾಲಕ ನಮಾಜ್ ಮಾಡಿದ್ದಾನೆ. ಘಟನೆಯ ದೃಶ್ಯವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
ಸದ್ಯ ನಮಾಝ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಬಸ್ ನಲ್ಲಿ ಪ್ರಯಾಣಿಕರಿದ್ದರೂ ಕರ್ತವ್ಯದ ಅವಧಿಯಲ್ಲಿಯೇ ನಮಾಝ್ ಮಾಡಿದ್ದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಕಂಕಂಡಕ್ಟರ್ ಸೀಟಿನ ಮೇಲೆ ಕುಳಿತು ನಮಾಜ್ ಮಾಡಿದ್ದು, ಸದ್ಯ ಈ ಚಾಲಕನ ನಡೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ.