Monday, December 9, 2024

ಹಲವು ವಿವಾದಗಳ ನಡುವೆಯೂ ಸಿಎಎ ಅಧಿಸೂಚನೆ ಜಾರಿಗೊಳಿಸಿದ ಮೋದಿ ಸರ್ಕಾರ

ನವದೆಹಲಿ(ಮಾರ್ಚ್ 11) ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರವು ಭಾರತದದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ( Citizenship Amendment Act) 3 ថåd. – ಮೂಲಕ ದೇಶಾದ್ಯಂತ ಸಿಎಎ ಪೌರತ್ವ ಕಾಯ್ದೆಯ ನಿಯಮಗಳ ಅಧಿಸೂಚನೆ ಹೊರಬಿದ್ದಿದೆ. 2019ರಲ್ಲಿ ಸಂಸತ್ತಿನಲ್ಲಿ ಸಿಎಎ ಕಾಯ್ದೆಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಆದ್ರೆ, ಇತ್ತೀಚೆಗೆ ಸಿಎಎ ಜಾರಿಗೊಳಿಸುವುದಾಗಿ ಅಮಿತ್ ಶಾ ಪುನರುಚ್ಚರಿಸಿದ್ದರು. ಇದರಂತೆ ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಿಎಎ ಅಧಿಸೂಚನೆ ಹೊರಡಿಸಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಸೇರಿ ವಿದೇಶದಿಂದ ಭಾರತಕ್ಕೆ ವಲಸೆ ಬಂದವರಿಗೆ ಪೌರತ್ವ ನೀಡಲಾಗುತ್ತದೆ. ಮುಸ್ಲಿಮರನ್ನು ಹೊರತುಪಡಿಸಿ ಬೇರೆ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.

ಹಿಂದೂ, ಕ್ರೈಸ್ತ, ಸಿಖ್ಖ್, ಬೌದ್ಧ, ಪಾರ್ಸಿ ಸಮುದಾಯಗಳಿಗೆ ಭಾರತದ ಪೌರತ್ವ ನೀಡಲಾಗುವುದು. ಈಗಾಗಲೇ ಲೋಕಸಭೆ, ರಾಜ್ಯಸಭೆಯಲ್ಲಿ ಸಿಎಎ ಕಾಯ್ದೆ ಅಂಗೀಕಾರವಾಗಿದೆ. 2014ರ ಡಿಸೆಂಬರ್ 30ಕ್ಕೂ ಮುಂಚಿತವಾಗಿ ಭಾರತಕ್ಕೆ ವಲಸೆ ಬಂದವರಿಗೆ ಭಾರತದ ಪೌರತ್ವ ನೀಡಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಇಂದಿನಿಂದಲೇ ಹೊಸ ನಿಯಮ ರೂಪಿಸಿ ಜಾರಿಗೆ ಅಧಿಸೂಚನೆ ಹೊರಡಿಸಿದೆ. ಈ ಸಿಎಎ ಜಾರಿಯಿಂದ ಭಾರತದ ಯಾವುದೇ ನಾಗರಿಕರ ಪೌರತ್ವಕ್ಕೆ ತೊಂದರೆ ಆಗುವುದಿಲ್ಲ.

ಭಾರತಕ್ಕೆ ವಲಸೆ ಬಂದವರು ಈ ದೇಶದ ಪೌರತ್ವ ಪಡೆಯಲು ಆನ್​ಲೈನ್ ಪೋರ್ಟಲ್​ನಲ್ಲಿ ನೋಂದಾಯಿಸಿಕೊಳ್ಳಬೇಕು. ಈಗ ಆನ್​ಲೈನ್ ಪೋರ್ಟಲ್ ರಚನೆಯಾಗಿದೆ. ಇನ್ನೂ ಈ ಪೋರ್ಟಲ್ ಬಗ್ಗೆ ಅಧಿಕೃತವಾಗಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಇಲಾಖೆ ಘೋಷಣೆ ಹೊರಡಿಸಲಿದೆ.

Related Articles

Latest Articles