ಸ್ಯಾಂಡಲ್ವುಡ್ ನಟ, ರಾಜಕಾರಣಿ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ನಗರದ ಎಚ್ ಸಿ ಜಿ ಆಸ್ಪತ್ರೆಗೆ ದಾಖಲಾಗಿದ್ದ ಶಿವರಾಮ್ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
71 ವರ್ಷದ ಶಿವರಾಮ್ ಅವರು ಕಾರ್ಡಿಯಕ್ ಅರೆಸ್ಟ್ ಆಗಿ ಆಸ್ಪತ್ರೆ ಸೇರಿದ್ದರು. ಆ ಬಳಿಕ ಅವರ ಬ್ರೈನ್ ಡೆಡ್ ಆಗಿದೆ. ಹೀಗಾಗಿ ಅವರ ಪರಿಸ್ಥಿತಿ ಚಿಂತಾಜನಕವಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.
ಸರ್ಕಾರಿ ಸೇವೆ, ಸಿನಿಮಾ ಕ್ಷೇತ್ರವಲ್ಲದೆ, ರಾಜಕೀಯದಲ್ಲೂ ಶಿವರಾಮ್ ಗುರುತಿಸಿಕೊಂಡಿದ್ದರು. 9ಕ್ಕೂ ಹೆಚ್ಚು ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ರಾಜಕೀಯಕ್ಕೂ ಧುಮುಕಿ ಲೋಕಸಭಾ ಚುನಾವಣೆಯಲ್ಲೂ ಸ್ಪರ್ಧಿಸಿದ್ದರು.