Tuesday, March 18, 2025

ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ: ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ

ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯ ಗುಡ್ಡ ಕುಸಿದು ಇಂದಿಗೆ ಆರು ದಿನವಾಗಿದೆ. ನಿರಂತರ ಧಾರಾಕಾರ ಮಳೆಯಲ್ಲೂ ಕೂಡ ಕಾರ್ಯಾಚರಣೆ ಮುಂದುವರೆದಿದೆ.‌ ಇಂದು ಸಿಎಂ ಸಿದ್ದರಾಮಯ್ಯ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ್ದು, SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ಮಾಡಿದ್ದಾರೆ.

ದುರಂತದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ, ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಗುಡ್ಡ ಕುಸಿದಿರುವ ಆರೋಪ ಕೇಳಿಬಂದಿದ್ದು, ಯಾರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳುತ್ತೇವೆ. ರಕ್ಷಣಾ ಕಾರ್ಯಾಚರಣೆ ಮುಕ್ತಾಯ ಬಳಿಕ ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Related Articles

Latest Articles