ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 28 ರಿಂದ ಡಿಸೆಂಬರ್ 1 ರವರೆಗೆ ರಾಜ್ಯದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಹಿಂಗಾರು ಮಳೆ ಕ್ಷೀಣಿಸಿದೆ.
ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಆಗುತ್ತಿದೆ. ರಾಜ್ಯದಲ್ಲಿ ನಾಲ್ಕು ದಿನ ಸಾಧಾರಣ ಮಳೆಯಾಗುವ ಸಂಭವ ಇದೆ.
ಇನ್ನು ಅಂಡಮಾನ್, ನಿಕೋಬಾರ್ ದ್ವೀಪಗಳ ಸಮೀಪ ವಾಯುಭಾರ ಕುಸಿತ ಉಂಟಾಗಿದ್ದು, ನವೆಂಬರ್ 29ರ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತ ಪಶ್ಚಿಮ, ವಾಯುವ್ಯಕ್ಕೆ ಚಲಿಸುವ ಸಂಭವ ಇದೆ.