Saturday, June 28, 2025

ಚೌತಿ, ಅಷ್ಟಮಿ ಹಬ್ಬ ಹತ್ತಿರ ಬರುತ್ತಿದ್ದಂತೆ ವಿವಾದ ಸೃಷ್ಟಿಸಿದ ಶಿಕ್ಷಣ ಇಲಾಖೆ ಸುತ್ತೋಲೆ? ಸುತ್ತೋಲೆಯಲ್ಲೇನಿದೆ?

ಹಬ್ಬಗಳು ಸಮೀಪಿಸುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಾದ ಸೃಷ್ಟಿಯಾಗಿದೆ. ಶಾಲೆಗಳ ಮೈದಾನಗಳನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕಕರು ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ. ಇದು ದಕ್ಷಿಣಕನ್ನಡದಲ್ಲಿ ಭಾರೀ ವಿವಾದ ಸೃಷ್ಟಿಸಿವ ಹಂತ ತಲುಪಿದೆ. ಈ ಬಾರಿ ಮಂಗಳೂರಿನ ಶಾಲಾ ಮೈದಾನಗಳಲ್ಲಿ ಗಣೇಶೋತ್ಸವ, ಕೃಷ್ಣ ಜನ್ಮಾಷ್ಟಮಿ ಅಚರಣೆಗೆ ಬ್ರೇಕ್ ಬೀಳುತ್ತಾ ಎನ್ನುವ ಪ್ರಶ್ನೆಗಳು ಮೂಡ ತೊಡಗಿದೆ.

ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸುತ್ತೋಲೆಯಲ್ಲೇನಿದೆ?
ಶೈಕ್ಷಣಿಕೇತರ ಚಟುವಟಿಕೆಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದ ಶಾಲಾ ಮುಖ್ಯಡಸ್ಥರೇ ಹೊಣೆಗಾರರಾಗುತ್ತಾರೆಂದು ದಕ್ಷಿಣ ಕನ್ನಡ ಡಿಡಿಪಿಐ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶಿಕ್ಷಣ ಇಲಾಖೆ ಆದೇಶ ಬೆನ್ನಲ್ಲೇ ಗಣೇಶೋತ್ಸವ, ಅಷ್ಟಮಿ ಆಚರಣೆಗೆ ಅನುಮತಿ ನೀಡಲು ಶಾಲಾಡಳಿತ ಮಂಡಳಿ ನಿರಾಕರಿಸಿದೆ. ಹೀಗಾಗಿ ಗ್ರಾಮದ ಸಂಘಟನೆಗಳು ಸ್ವಯಂ ಪ್ರೇರಿತವಾಗಿ ನಡೆಸಿಕೊಂಡು ಬರುತ್ತಿದ್ದ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆಗಳಿವೆ.

ಗಣೇಶೋತ್ಸವ ಹಾಗೂ ಶ್ರೀಕೃಷ್ಣ ಕೃಷ್ಣ ಜನ್ಮಾಷ್ಟಮಿ ಸಮೀಪಿಸುತ್ತಿದ್ದಂತೆಯೇ ಈ ಸುತ್ತೋಲೆ ಹೊರಡಿಸಿರುವುದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸುತ್ತೋಲೆಗೆ ಬಿಜೆಪಿ‌ ಮತ್ತು ಹಿಂದೂ ಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಲವು ವರ್ಷಗಳಿಂದ ದ‌‌ಕ್ಷಿಣ ಕನ್ನಡ ಜಿಲ್ಲೆಯ ಹಲವು ಸರ್ಕಾರಿ ಶಾಲಾ ಮೈದಾನಗಳಲ್ಲಿ ಗಣೇಶೋತ್ಸವ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಈ ಬಾರಿ ಶಿಕ್ಷಣ ಇಲಾಖೆ ಹೊಸ ಆದೇಶದಿಂದ ಗಣೇಶೋತ್ಸವ ಅಚರಣೆಗೆ ಬ್ರೇಕ್ ಹಾಕಲು ಮುಂದಾಗಿದೆ. ಸರ್ಕಾರ ಈ ಕೂಡಲೇ ಆದೇಶ ಹಿಂಪಡೆಯುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಒತ್ತಾಯಿಸಿದ್ದಾರೆ.

ಸದ್ಯ ಈ ಸುತ್ತೋಲೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿವೆ. ಇದು ರಾಜಕೀಯ ಜಟಾಪಟಿಗೆ ಕಾರಣವಾಗು ಸಾಧ್ಯತೆಗಳಿದ್ದು, ಮುಂದೆ ಯಾವ ಹಂತಕ್ಕೆ ಹೋಗಲಿದೆ ಎನ್ನುವುದನ್ನು ಕಾದುಬೋಡಬೇಕಿದೆ.

Dakshina Kannada: Education Board Circular makes controversy while Chauthi and Ashthami Fest arrival time

Related Articles

Latest Articles